ಸಿಂಗಪುರದಲ್ಲಿ ಯಶಸ್ವಿಯಾಗಿ ನಡೆದ ಎರಡನೇ ವಿಶ್ವ ಕನ್ನಡ ಹಬ್ಬ, ಶುಭ ಹಾರೈಸಿದ ಶಿವರಾಜ್ ಕುಮಾರ್
ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಈ ಸಮಾರಂಭಕ್ಕೆ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಆಗಮಿಸಬೇಕಿತ್ತು. ಅನಾರೋಗ್ಯದ ನಿಮಿತ್ತ ಬರಲಾಗದಿದ್ದಕ್ಕೆ ವಿಡಿಯೋ ಮೂಲಕ ಸಿಂಗಪುರ ಕನ್ನಡಿಗರಿಗೆ ಶುಭ ಹಾರೈಸಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಕನ್ನಡ ಭಾಷೆಯ ಸೊಗಡು, ಸಂಸ್ಕೃತಿಯ ಘಮಲನ್ನು ವಿದೇಶದಲ್ಲೂ ಪಸರಿಸಬೇಕೆಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಯಶಸ್ವಿಯಾಗಿ ನಡೆಸಿತ್ತು. ಅದೇರೀತಿ ಈ ವರ್ಷ ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಪುರದಲ್ಲಿ ಯಶಸ್ವಿಯಾಗಿ ಮುಗಿಸಿಕೊಂಡು ಬಂದಿದೆ. ಈ ಬಗ್ಗೆ ವಿವರಿಸಲೆಂದೇ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷ ಡಾ. ಶಿವಕುಮಾರ್ ನಾಗರ ನವಿಲೆ, 2ನೇ ವಿಶ್ವ ಕನ್ನಡ ಹಬ್ಬದ ಸರ್ವಾಧ್ಯಕ್ಷರಾದ ಡಾ.ಸಿ. ಸೋಮಶೇಖರ್, ಸಾಂಸ್ಕೃತಿಕ ಅಧ್ಯಕ್ಷರಾದ ನಟಿ ರೂಪಿಕಾ,ಪ್ರತಿಭಾ ಪಟುವರ್ಧನ್, ಸೈ ರಮೇಶ್, ಕಾರ್ಯದರ್ಶಿ ರಂಜಿತಾ, ಸಿಂಚನ ದೀಕ್ಷಿತ್ ಮುಂತಾದವರು ಈ ಹಾಜರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಇದೊಂದು ದೊಡ್ಡ ಯಜ್ಞ ಎನ್ನಬಹುದು. ಎಷ್ಟೇ ಅಡೆತಡೆಗಳು ಎದುರಾದರೂ ಎದೆಗುಂದದೆ ಯಶಸ್ವಿಯಾಗಿ ಮಾಡಿದ್ದೇವೆ. ಅಂದು ಬೆಳಗಿನಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು,ವಕವಿಗೋಷ್ಠಿ, ಜನಪದ ಗಾಯನ, ನಾಟಕ, ಪ್ರಶಸ್ತಿ ವಿತರಣೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆದವು. ಇಸ್ರೋ ವಿಜ್ಞಾನಿ ಎಸ್. ಕಿರಣ್ ಕುಮಾರ್ ಅವರಿಗೆ 2024ನೇ ಸಾಲಿನ ವಿಶ್ವಮಾನವ ಪ್ರಶಸ್ತಿ ಹಾಗೂ ಮೀನಾರಾಜ್ ಅವರಿಗೆ ವಿಶ್ವಕನ್ನಡತಿ ಕಿರೀಟವನ್ನು ನೀಡಿ ಗೌರವಿಸಲಾಯಿತು. ವಿಶೇಷವಾಗಿ ಸಿದ್ದಿ ಜನಾಂಗದ 10 ಪ್ರತಿಭೆಗಳನ್ನು ಕರೆದೊಯ್ದು ಅವರಿಗೂ ವೇದಿಕೆ ಕಲ್ಪಿಸಿದ್ದೆವು. ಇಲ್ಲಿಂದ ಒಟ್ಟು 120 ಕ್ಕೂ ಹೆಚ್ಚು ಜನ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದೆವು ಎಂದು ಹೇಳಿದರು. ನಂತರ ಸಿ.ಸೋಮಶೇಖರ್, ಮಾತನಾಡುತ್ತ ಹೊರದೇಶದಲ್ಲಿ ಇಂಥ ಕಾರ್ಯಕ್ರಮ ಮಾಡುವುದು ಸುಲಭದ ಮಾತಲ್ಲ, ತುಂಬಾ ಜವಾಬ್ದಾರಿ ಇರುತ್ತದೆ. ಈ ಸಾಹಸಕ್ಕೆ ಕೈ ಹಾಕಿರುವ ಶಿವಕುಮಾರ್ ಅವರ ಕನಸನ್ನು ನನಸು ಮಾಡಲಿಕ್ಕೆ ನಾವೆಲ್ಲ ಶ್ರಮಿಸಿದ್ದೇವೆ. ಕೆಳಸ್ತರದ ಪ್ರತಿಭೆಗಳನ್ನು ಗುರ್ತಿಸುವುದು ಈ ಕಾರ್ಯಕ್ರಮದ ಮತ್ತೊಂದು ಆಶಯ. ಆನಂದ ಗುರೂಜಿಯವರು, ಜಾನಪದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅಲ್ಲದೆ ಸಿಂಗಪುರ ಕನ್ನಡ ಸಂಘದ ಅಧ್ಯಕ್ಷರಾದ ವೆಂಕಟ ರತ್ನಯ್ಯ ಸೇರಿದಂತೆ ಹಲವಾರು ಗಣ್ಯಮಾನ್ಯರುಗಳು ಈ ವಿಶ್ವ ಕನ್ನಡ ಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದರು. ಅದೊಂದು ಸುಂದರ ಹಾಗೂ ಸಾರ್ಥಕ ಸಮಾರಂಭವಾಗಿತ್ತು ಎಂದು ವಿವರಿಸಿದರು. ಪಸಂದಾಗವ್ನೆ ಖ್ಯಾತಿಯ ಗಾಯಕಿ ಮಂಗ್ಲಿ ಅವರ ಗಾಯನ, ಕಾರ್ಯಕ್ರಮದ ರಾಯಭಾರಿ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯ ಅವರ ಅದ್ಭುತ ಡ್ಯಾನ್ಸ್ ಪರ್ಫಾರ್ಮನ್ಸ್ ವೇದಿಕೆಯ ಮುಖ್ಯ ಆಕರ್ಷಣೆಯಾಗಿತ್ತು. ವಿದೇಶಗಳಲ್ಲಿ ಕನ್ನಡ ಭಾಷೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಜತೆಗೆ ಸಾಧನೆಗೈದ ಕನ್ನಡಿಗರಿಗೆ ಗೌರವ ಸಲ್ಲಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ನ. 22ರಂದು ಆಧುನಿಕ ತಂತ್ರಜ್ಞಾನದೊಂದಿಗೆ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಬಿಡುಗಡೆ
ವಿದ್ಯಾರ್ಥಿಗಳಿಗೆ 50% ರಿಯಾಯಿತಿ !
ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಭಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' 2012ರಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು. ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟೀಷರ ವಿರುದ್ದ ತೊಡೆತಟ್ಟಿ ನಿಂತ ಕೆಚ್ಚೆದೆಯ ವೀರ ಯೋಧ ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದರು. ಹಿರಿಯನಟಿ ಜಯಪ್ರದ ಅವರು ಕಿತ್ತೂರು ರಾಣಿ ಚನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉತ್ತರ ಕರ್ನಾಟಕದ ಆನಂದ್ ಬಿ.ಅಪ್ಪುಗೋಳ್ ಅವರು ಈ ಚಿತ್ರವನ್ನು ಬಿಗ್ ಬಜೆಟ್ ನಲ್ಲಿ ಅದ್ದೂರಿಯಾಗಿ ನಿರ್ಮಿಸಿದ್ದ ಈ ಚಿತ್ರಕ್ಕೆ ನಿರ್ದೇಶಕ ನಾಗಣ್ಣ ಅವರು ಆಕ್ಷನ್ ಕಟ್ ಹೇಳಿದ್ದರು. ಫಿಲಂ ಫೇರ್ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಸಹ ಈ ಚಿತ್ರ ತನ್ನದಾಗಿಸಿಕೊಂಡಿತ್ತು. ಇದೀಗ ಅದೇ ಚಿತ್ರ ಆಧುನಿಕ ತಂತ್ರಜ್ಞಾನ ಸ್ಪರ್ಷದೊಂದಿಗೆ ನವೆಂಬರ್ 22 ರಂದು ಮರುಬಿಡುಗಡೆಯಾಗುತ್ತಿದೆ. ಇತಿಹಾಸ ನಿರ್ಮಿಸಿದ ಇಂಥ ಎಪಿಕ್ ಸ್ಟೋರಿಯನ್ನು ಎಸ್.ಜಿ.ಕೆ. ಫಿಲಂಸ್ ಮೂಲಕ ಕೆ.ಬಸವರಾಜ್ ಅವರು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಸ್ವಾಭಿಮಾನದ ಕಿಚ್ಚು ಹೆಚ್ಚಿಸುವ ಈ ವೀರಸೇನಾನಿಯ ಕಥೆಯನ್ನು ಮಾಡ್ರನ್ ಟೆಕ್ನಾಲಜಿಯ ಸ್ಪರ್ಷದೊಂದಿಗೆ ದರ್ಶನ್ ಅಭಿಮಾನಿಗಳು ಕಣ್ತುಂಬಿಕೊಳ್ಳುವ ಅವಕಾಶ ಮತ್ತೊಮ್ಮೆ ಲಭಿಸಿದೆ. ವಿಶೇಷವಾಗಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಮಂದಿರದ ಪ್ರವೇಶ ದರದಲ್ಲಿ 50% ರಿಯಾಯಿತಿ ಇರುತ್ತದೆ. ಬೆಡಗಿ ನಿಖಿತಾ ತುಕ್ರಾಲ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದು, ಶಶಿಕುಮಾರ್, ಮಾಳವಿಕ ಅವಿನಾಶ್, ರಮೇಶ್ ಭಟ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇಶವಾದಿತ್ಯ ಅವರ ಚಿತ್ರಕಥೆ ಹಾಗೂ ಸಂಭಾಷಣೆ, ರಮೇಶ್ ಬಾಬು ಅವರ ಛಾಯಾಗ್ರಹಣ, ಯಶೋವರ್ಧನ್, ಹರಿಕೃಷ್ಣ ಅವರ ಸಂಗೀತ ಸಂಯೋಜನೆ, ದೀಪು ಅವರ ಸಂಕಲನ, ರವಿವರ್ಮ, ಪಳನಿರಾಜ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.ಉತ್ತರ ಕರ್ನಾಟಕದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಿನಿಮಾನ ದರ್ಶನ್ ಅಭಿಮಾನಿಗಳು ಹಾಗು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಬ್ಬ ರೀತಿ ಆಚರಿಸುತಿದ್ದರೆ
'ರಿದಂ'ಗೆ ರಾಯರ ಆಶೀರ್ವಾದ ಮಂತ್ರಾಲಯದಲ್ಲಿ ಟ್ರೈಲರ್ ಬಿಡುಗಡೆ
ಎಕ್ಸ್ ಕ್ಯೂಸ್ ಮಿ ನಂತರ ಎರಡು ದಶಕಗಳಾದ ಮೇಲೆ ಅಂಥದೇ ಮ್ಯೂಸಿಕಲ್ ಲವ್ ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ. ಅದರ ಹೆಸರು ರಿದಂ. ಮಂಜು ಮೂವೀಸ್ ಬ್ಯಾನರ್ ಅಡಿ ನಟ, ನಿರ್ದೇಶಕ ಮಂಜು ಮಿಲನ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ಚಿತ್ರದ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಇದೇ ತಿಂಗಳು 29ರಂದು ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರನ್ನು ಇತ್ತೀ ಚೆಗಷ್ಟೇ ಮಂತ್ರಾಲಯದ ಶ್ರೀಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ ಮುತ್ತಿನ ಮಳೆಯಲಿ, ಪ್ರೀತಿ ಎಂದರೇನು ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಿಲನ್ ಅವರ ನಿರ್ದೇಶನ ಹಾಗೂ ನಿರ್ಮಾಣದ 3ನೇ ಚಿತ್ರವಿದು. 9 ಸುಂದರ ಹಾಡುಗಳನ್ನು ಒಳಗೊಂಡ ರಿದಂ ಒಂದು ಮ್ಯೂಸಿಕಲ್ ಲವ್ ಸ್ಟೋರಿ ಒಳಗೊಂಡಿದ್ದರೂ ನೋಡುಗರಿಗೆ ಎಮೋಷನಲಿ ಕನೆಕ್ಟ್ ಆಗುತ್ತದೆ. ಅಲ್ಲದೆ ಈ ಚಿತ್ರದ 45% ಶೂಟಿಂಗ್ ಸಾಗರದಾಚೆಯ ಸಿಂಗಪೂರ್ ನಲ್ಲೇ ನಡೆದಿರುವುದು ವಿಶೇಷ. ಉಳಿದಂತೆ ಬೆಂಗಳೂರು, ಮೈಸೂರು, ಶ್ರೀರಂಗಪಟ್ಟಣ ಹಾಗೂ ಮೇಲುಕೋಟೆಯ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಈಗಾಗಲೇ ಸೆನ್ಸಾರ್ ನಿಂದ U/A ಪ್ರಮಾಣ ಪತ್ರ ಪಡೆದಿರುವ ರಿದಂ ಚಿತ್ರಕ್ಕೆ ಎ.ಟಿ.ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದು, ಅಚ್ಚು ಸುರೇಶ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ 4 ಸಾಹಸ ದೃಶ್ಯಗಳಿದ್ದು ಅಲ್ಟಿಮೇಟ್ ಶಿವು, ಫಯಾಜ್ ಖಾನ್ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದಾರೆ. ಮಂಜು ಮಿಲನ್, ಮೇಘಶ್ರೀ ಚಿತ್ರದ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದು, ಉಳಿದ ತಾರಾಗಣದಲ್ಲಿ ಹಿರಿಯ ನಟರಾದ ಸುಮನ್, ಶ್ರೀನಿವಾಸಮೂರ್ತಿ, ಶಿವರಾಮ್, ವಿನಯ್ ಪ್ರಸಾದ್, ಭವ್ಯ, ಗಿರಿಜಾ ಲೋಕೇಶ್, ಮಿಮಿಕ್ರಿ ದಯಾನಂದ್ ಹಾಗೂ ಮುಖ್ಯ ಮಂತ್ರಿ ಚಂದ್ರು ನಟಿಸಿದ್ದಾರೆ.
KFI News
"ನಮ್ ಪೈಕಿ ಒಬ್ಬ ವೊಬುಟ್ಟಾ" ಲಿರಿಕಲ್ ವಿಡಿಯೋ ಸಾಂಗ್
https://youtu.be/GoQvEDej3CE?si=hTjgH...
7 months ago | [YT] | 27
View 0 replies
KFI News
ಸಿಂಗಪುರದಲ್ಲಿ ಯಶಸ್ವಿಯಾಗಿ ನಡೆದ
ಎರಡನೇ ವಿಶ್ವ ಕನ್ನಡ ಹಬ್ಬ,
ಶುಭ ಹಾರೈಸಿದ ಶಿವರಾಜ್ ಕುಮಾರ್
ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಈ ಸಮಾರಂಭಕ್ಕೆ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಆಗಮಿಸಬೇಕಿತ್ತು. ಅನಾರೋಗ್ಯದ ನಿಮಿತ್ತ ಬರಲಾಗದಿದ್ದಕ್ಕೆ ವಿಡಿಯೋ ಮೂಲಕ ಸಿಂಗಪುರ ಕನ್ನಡಿಗರಿಗೆ ಶುಭ ಹಾರೈಸಿದ್ದಾರೆ.
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಕನ್ನಡ ಭಾಷೆಯ ಸೊಗಡು, ಸಂಸ್ಕೃತಿಯ ಘಮಲನ್ನು ವಿದೇಶದಲ್ಲೂ ಪಸರಿಸಬೇಕೆಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಯಶಸ್ವಿಯಾಗಿ ನಡೆಸಿತ್ತು. ಅದೇರೀತಿ ಈ ವರ್ಷ ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಪುರದಲ್ಲಿ ಯಶಸ್ವಿಯಾಗಿ ಮುಗಿಸಿಕೊಂಡು ಬಂದಿದೆ. ಈ ಬಗ್ಗೆ ವಿವರಿಸಲೆಂದೇ ನಡೆದ ಪತ್ರಿಕಾಗೋಷ್ಠಿಯಲ್ಲಿ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷ ಡಾ. ಶಿವಕುಮಾರ್ ನಾಗರ ನವಿಲೆ, 2ನೇ ವಿಶ್ವ ಕನ್ನಡ ಹಬ್ಬದ ಸರ್ವಾಧ್ಯಕ್ಷರಾದ ಡಾ.ಸಿ. ಸೋಮಶೇಖರ್, ಸಾಂಸ್ಕೃತಿಕ ಅಧ್ಯಕ್ಷರಾದ ನಟಿ ರೂಪಿಕಾ,ಪ್ರತಿಭಾ ಪಟುವರ್ಧನ್, ಸೈ ರಮೇಶ್, ಕಾರ್ಯದರ್ಶಿ ರಂಜಿತಾ, ಸಿಂಚನ ದೀಕ್ಷಿತ್ ಮುಂತಾದವರು ಈ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಇದೊಂದು ದೊಡ್ಡ ಯಜ್ಞ ಎನ್ನಬಹುದು. ಎಷ್ಟೇ ಅಡೆತಡೆಗಳು ಎದುರಾದರೂ ಎದೆಗುಂದದೆ ಯಶಸ್ವಿಯಾಗಿ ಮಾಡಿದ್ದೇವೆ. ಅಂದು ಬೆಳಗಿನಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳು,ವಕವಿಗೋಷ್ಠಿ, ಜನಪದ ಗಾಯನ, ನಾಟಕ, ಪ್ರಶಸ್ತಿ ವಿತರಣೆ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆದವು.
ಇಸ್ರೋ ವಿಜ್ಞಾನಿ ಎಸ್. ಕಿರಣ್ ಕುಮಾರ್ ಅವರಿಗೆ
2024ನೇ ಸಾಲಿನ ವಿಶ್ವಮಾನವ ಪ್ರಶಸ್ತಿ ಹಾಗೂ ಮೀನಾರಾಜ್ ಅವರಿಗೆ ವಿಶ್ವಕನ್ನಡತಿ ಕಿರೀಟವನ್ನು
ನೀಡಿ ಗೌರವಿಸಲಾಯಿತು. ವಿಶೇಷವಾಗಿ ಸಿದ್ದಿ ಜನಾಂಗದ 10 ಪ್ರತಿಭೆಗಳನ್ನು ಕರೆದೊಯ್ದು ಅವರಿಗೂ ವೇದಿಕೆ ಕಲ್ಪಿಸಿದ್ದೆವು. ಇಲ್ಲಿಂದ ಒಟ್ಟು 120 ಕ್ಕೂ ಹೆಚ್ಚು ಜನ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದೆವು ಎಂದು ಹೇಳಿದರು.
ನಂತರ ಸಿ.ಸೋಮಶೇಖರ್, ಮಾತನಾಡುತ್ತ ಹೊರದೇಶದಲ್ಲಿ ಇಂಥ ಕಾರ್ಯಕ್ರಮ ಮಾಡುವುದು ಸುಲಭದ ಮಾತಲ್ಲ, ತುಂಬಾ ಜವಾಬ್ದಾರಿ ಇರುತ್ತದೆ. ಈ ಸಾಹಸಕ್ಕೆ ಕೈ ಹಾಕಿರುವ ಶಿವಕುಮಾರ್ ಅವರ ಕನಸನ್ನು ನನಸು ಮಾಡಲಿಕ್ಕೆ ನಾವೆಲ್ಲ ಶ್ರಮಿಸಿದ್ದೇವೆ. ಕೆಳಸ್ತರದ ಪ್ರತಿಭೆಗಳನ್ನು ಗುರ್ತಿಸುವುದು ಈ ಕಾರ್ಯಕ್ರಮದ ಮತ್ತೊಂದು ಆಶಯ. ಆನಂದ ಗುರೂಜಿಯವರು, ಜಾನಪದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅಲ್ಲದೆ ಸಿಂಗಪುರ ಕನ್ನಡ ಸಂಘದ ಅಧ್ಯಕ್ಷರಾದ ವೆಂಕಟ ರತ್ನಯ್ಯ ಸೇರಿದಂತೆ ಹಲವಾರು ಗಣ್ಯಮಾನ್ಯರುಗಳು ಈ ವಿಶ್ವ ಕನ್ನಡ ಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದರು. ಅದೊಂದು ಸುಂದರ ಹಾಗೂ ಸಾರ್ಥಕ ಸಮಾರಂಭವಾಗಿತ್ತು ಎಂದು ವಿವರಿಸಿದರು.
ಪಸಂದಾಗವ್ನೆ ಖ್ಯಾತಿಯ ಗಾಯಕಿ ಮಂಗ್ಲಿ ಅವರ ಗಾಯನ, ಕಾರ್ಯಕ್ರಮದ ರಾಯಭಾರಿ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯ ಅವರ ಅದ್ಭುತ ಡ್ಯಾನ್ಸ್ ಪರ್ಫಾರ್ಮನ್ಸ್ ವೇದಿಕೆಯ ಮುಖ್ಯ ಆಕರ್ಷಣೆಯಾಗಿತ್ತು.
ವಿದೇಶಗಳಲ್ಲಿ ಕನ್ನಡ ಭಾಷೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಜತೆಗೆ ಸಾಧನೆಗೈದ ಕನ್ನಡಿಗರಿಗೆ ಗೌರವ ಸಲ್ಲಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
10 months ago | [YT] | 933
View 3 replies
KFI News
Sapthami Gowda New Photoshoot 😍
10 months ago | [YT] | 1,652
View 11 replies
KFI News
ನಿಖಿಲ್ ಕುಮಾರಸ್ವಾಮಿ ಕುಟುಂಬ 😍
10 months ago | [YT] | 10,623
View 41 replies
KFI News
ನ. 22ರಂದು ಆಧುನಿಕ ತಂತ್ರಜ್ಞಾನದೊಂದಿಗೆ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಬಿಡುಗಡೆ
ವಿದ್ಯಾರ್ಥಿಗಳಿಗೆ 50% ರಿಯಾಯಿತಿ !
ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಭಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' 2012ರಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು.
ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟೀಷರ ವಿರುದ್ದ ತೊಡೆತಟ್ಟಿ ನಿಂತ ಕೆಚ್ಚೆದೆಯ ವೀರ ಯೋಧ ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದರು. ಹಿರಿಯನಟಿ ಜಯಪ್ರದ ಅವರು ಕಿತ್ತೂರು ರಾಣಿ ಚನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉತ್ತರ ಕರ್ನಾಟಕದ ಆನಂದ್ ಬಿ.ಅಪ್ಪುಗೋಳ್ ಅವರು ಈ ಚಿತ್ರವನ್ನು ಬಿಗ್ ಬಜೆಟ್ ನಲ್ಲಿ ಅದ್ದೂರಿಯಾಗಿ ನಿರ್ಮಿಸಿದ್ದ ಈ ಚಿತ್ರಕ್ಕೆ ನಿರ್ದೇಶಕ ನಾಗಣ್ಣ ಅವರು ಆಕ್ಷನ್ ಕಟ್ ಹೇಳಿದ್ದರು. ಫಿಲಂ ಫೇರ್ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಸಹ ಈ ಚಿತ್ರ ತನ್ನದಾಗಿಸಿಕೊಂಡಿತ್ತು.
ಇದೀಗ ಅದೇ ಚಿತ್ರ ಆಧುನಿಕ ತಂತ್ರಜ್ಞಾನ ಸ್ಪರ್ಷದೊಂದಿಗೆ ನವೆಂಬರ್ 22 ರಂದು ಮರುಬಿಡುಗಡೆಯಾಗುತ್ತಿದೆ. ಇತಿಹಾಸ ನಿರ್ಮಿಸಿದ
ಇಂಥ ಎಪಿಕ್ ಸ್ಟೋರಿಯನ್ನು ಎಸ್.ಜಿ.ಕೆ. ಫಿಲಂಸ್ ಮೂಲಕ ಕೆ.ಬಸವರಾಜ್ ಅವರು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ. ಸ್ವಾಭಿಮಾನದ ಕಿಚ್ಚು ಹೆಚ್ಚಿಸುವ ಈ ವೀರಸೇನಾನಿಯ ಕಥೆಯನ್ನು ಮಾಡ್ರನ್ ಟೆಕ್ನಾಲಜಿಯ ಸ್ಪರ್ಷದೊಂದಿಗೆ ದರ್ಶನ್ ಅಭಿಮಾನಿಗಳು ಕಣ್ತುಂಬಿಕೊಳ್ಳುವ ಅವಕಾಶ ಮತ್ತೊಮ್ಮೆ ಲಭಿಸಿದೆ. ವಿಶೇಷವಾಗಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಮಂದಿರದ ಪ್ರವೇಶ ದರದಲ್ಲಿ 50% ರಿಯಾಯಿತಿ ಇರುತ್ತದೆ.
ಬೆಡಗಿ ನಿಖಿತಾ ತುಕ್ರಾಲ್ ಈ ಚಿತ್ರದ ನಾಯಕಿಯಾಗಿ ನಟಿಸಿದ್ದು, ಶಶಿಕುಮಾರ್, ಮಾಳವಿಕ ಅವಿನಾಶ್, ರಮೇಶ್ ಭಟ್, ದೊಡ್ಡಣ್ಣ, ಶ್ರೀನಿವಾಸ ಮೂರ್ತಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೇಶವಾದಿತ್ಯ ಅವರ ಚಿತ್ರಕಥೆ ಹಾಗೂ ಸಂಭಾಷಣೆ, ರಮೇಶ್ ಬಾಬು ಅವರ ಛಾಯಾಗ್ರಹಣ, ಯಶೋವರ್ಧನ್, ಹರಿಕೃಷ್ಣ ಅವರ ಸಂಗೀತ ಸಂಯೋಜನೆ, ದೀಪು ಅವರ ಸಂಕಲನ, ರವಿವರ್ಮ, ಪಳನಿರಾಜ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.ಉತ್ತರ ಕರ್ನಾಟಕದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಿನಿಮಾನ ದರ್ಶನ್ ಅಭಿಮಾನಿಗಳು ಹಾಗು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಹಬ್ಬ ರೀತಿ ಆಚರಿಸುತಿದ್ದರೆ
https://youtu.be/NgD94bOwA8E?si=6Qgza...
10 months ago | [YT] | 962
View 8 replies
KFI News
ಡಾಲಿ ನಿಶ್ಚಿತಾರ್ಥ😍
10 months ago | [YT] | 12,436
View 23 replies
KFI News
ಮೊದಲನೇ ಮಗುವಿನ ನಿರೀಕ್ಷೆಯಲ್ಲಿ ನಟ ರಿಷಿ ದಂಪತಿ😍🤰🏻
10 months ago | [YT] | 665
View 1 reply
KFI News
ಸೋನಲ್ ತರುಣ್ ಫೋಟೋಸ್ ❤️
10 months ago | [YT] | 2,345
View 2 replies
KFI News
'ರಿದಂ'ಗೆ ರಾಯರ ಆಶೀರ್ವಾದ
ಮಂತ್ರಾಲಯದಲ್ಲಿ ಟ್ರೈಲರ್ ಬಿಡುಗಡೆ
ಎಕ್ಸ್ ಕ್ಯೂಸ್ ಮಿ ನಂತರ ಎರಡು ದಶಕಗಳಾದ ಮೇಲೆ ಅಂಥದೇ ಮ್ಯೂಸಿಕಲ್ ಲವ್ ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ. ಅದರ ಹೆಸರು ರಿದಂ. ಮಂಜು ಮೂವೀಸ್ ಬ್ಯಾನರ್ ಅಡಿ ನಟ, ನಿರ್ದೇಶಕ ಮಂಜು ಮಿಲನ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ಚಿತ್ರದ ನಾಯಕನಾಗೂ ಕಾಣಿಸಿಕೊಂಡಿದ್ದಾರೆ.
ಇದೇ ತಿಂಗಳು 29ರಂದು ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಟ್ರೈಲರನ್ನು ಇತ್ತೀ ಚೆಗಷ್ಟೇ ಮಂತ್ರಾಲಯದ ಶ್ರೀಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ ಮುತ್ತಿನ ಮಳೆಯಲಿ, ಪ್ರೀತಿ ಎಂದರೇನು ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಿಲನ್ ಅವರ ನಿರ್ದೇಶನ ಹಾಗೂ ನಿರ್ಮಾಣದ 3ನೇ ಚಿತ್ರವಿದು. 9 ಸುಂದರ ಹಾಡುಗಳನ್ನು ಒಳಗೊಂಡ ರಿದಂ ಒಂದು ಮ್ಯೂಸಿಕಲ್ ಲವ್ ಸ್ಟೋರಿ ಒಳಗೊಂಡಿದ್ದರೂ ನೋಡುಗರಿಗೆ ಎಮೋಷನಲಿ ಕನೆಕ್ಟ್ ಆಗುತ್ತದೆ. ಅಲ್ಲದೆ ಈ ಚಿತ್ರದ 45% ಶೂಟಿಂಗ್ ಸಾಗರದಾಚೆಯ ಸಿಂಗಪೂರ್ ನಲ್ಲೇ ನಡೆದಿರುವುದು ವಿಶೇಷ. ಉಳಿದಂತೆ ಬೆಂಗಳೂರು, ಮೈಸೂರು, ಶ್ರೀರಂಗಪಟ್ಟಣ ಹಾಗೂ ಮೇಲುಕೋಟೆಯ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಈಗಾಗಲೇ ಸೆನ್ಸಾರ್ ನಿಂದ U/A ಪ್ರಮಾಣ ಪತ್ರ ಪಡೆದಿರುವ
ರಿದಂ ಚಿತ್ರಕ್ಕೆ ಎ.ಟಿ.ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದು, ಅಚ್ಚು ಸುರೇಶ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ 4 ಸಾಹಸ ದೃಶ್ಯಗಳಿದ್ದು ಅಲ್ಟಿಮೇಟ್ ಶಿವು, ಫಯಾಜ್ ಖಾನ್ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡಿದ್ದಾರೆ.
ಮಂಜು ಮಿಲನ್, ಮೇಘಶ್ರೀ ಚಿತ್ರದ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದು, ಉಳಿದ ತಾರಾಗಣದಲ್ಲಿ ಹಿರಿಯ ನಟರಾದ ಸುಮನ್, ಶ್ರೀನಿವಾಸಮೂರ್ತಿ, ಶಿವರಾಮ್, ವಿನಯ್ ಪ್ರಸಾದ್, ಭವ್ಯ, ಗಿರಿಜಾ ಲೋಕೇಶ್, ಮಿಮಿಕ್ರಿ ದಯಾನಂದ್ ಹಾಗೂ ಮುಖ್ಯ ಮಂತ್ರಿ ಚಂದ್ರು ನಟಿಸಿದ್ದಾರೆ.
https://youtu.be/SAKmoSpF_0c?si=4Cb86...
10 months ago | [YT] | 62
View 0 replies
KFI News
ನಟಿ ರೀಶಗೌಡ ವರ್ಕ್ ಔಟ್‌ನಲ್ಲಿ ಬ್ಯುಸಿ❤
#RishaGowda #Risha #Sandalwood #Heroine #Kannada #Actress #KFI #NammaKFI
10 months ago | [YT] | 110
View 3 replies
Load more