YadgirNews

#Ra9one

4 months ago | [YT] | 2

YadgirNews

Yadgir News Laxmi Hebbalkar On CM Siddaramaiah | ಪೊಲೀಸ್‌ ಅಧಿಕಾರಿ ಮೇಲೆ ಕೈ ಮಾಡಿದ್ದನ್ನು ನಾನು ಒಪ್ಪಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

#Belagavi #Siddaramaiah #Congress #DharwadASP

8 months ago | [YT] | 5

YadgirNews

ಯಾದಗಿರಿ | ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಧಾರಾಕಾರ ಮಳೆ.. ಗಾಳಿ ಮಳೆಗೆ ಅನ್ನದಾತರ ಬದುಕು ಬರ್ಬಾದ್.. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಸರ್ವನಾಶ. ಜಿಲ್ಲೆಯ ಹುಣಸಗಿ ತಾಲೂಕಿನಾದ್ಯಂತ ಅಪಾರ ಪ್ರಮಾಣದ ಭತ್ತದ ಬೆಳೆ ನಾಶ‌.. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕಚ್ಚಿದೆ.. ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮವೊಂದರಲ್ಲೇ ನೂರಾರು ಎಕರೆ ಭತ್ತ ನಾಶ.‌.
#Hevayrain #Raineffcet #Yadgir #food #ruined #Ricecrops #ricecropsdestroyed #Hunasagi #harvest #Ricefields #Kamanatagi #Farmer #Rainfall #Wind

9 months ago | [YT] | 1

YadgirNews

►► BREAKING NEWS

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

► ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ,

ಬೆಂಗಳೂರು: ಮಾ.1ರಿಂದ ಮಾ.20ರ ವರೆಗೆ ನಡೆದಿದ್ದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಎ.8) ಪ್ರಕಟಗೊಂಡಿದೆ.

ಈ ಸಂಬಂಧ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಲಾ ವಿಭಾಗದಲ್ಲಿ ಸಂಜನಾ ಬಾಯಿ, ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಮತ್ತು ವಿಜ್ಞಾನ ವಿಭಾಗದಲ್ಲಿ ಅಮೂಲ್ಯಾ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ ಪಡೆದಿದೆ ಎಂದು ಮಾಹಿತಿ ನೀಡಿದರು.

#BreakingNews #dakshinakannada #udupi #yadagiri #yadgir

9 months ago | [YT] | 1

YadgirNews

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಯಾದಗಿರಿ:ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

9 months ago | [YT] | 7

YadgirNews

9 months ago | [YT] | 5

YadgirNews

ನಾರಾಯಣಪುರ ಕಾಲುವೆಗಳಿಗೆ ನೀರು ಬಂದ್: ಪ್ರತಿಭಟನೆ ಕೈಬಿಡುವಂತೆ ರೈತರಲ್ಲಿ ಮನವಿ

ಯಾದಗಿರಿ:ಮಾ:23:ಸರ್ಕಾರವು ನಾರಾಯಣಪುರ ಕಾಲುವೆಗಳಿಗೆ ಮಾರ್ಚ್ 25 ರಿಂದ ನೀರು ಬಂದ್ ಮಾಡಿದ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ರೈತ ಸೇನೆ ವತಿಯಿಂದ ಹತ್ತಿಗುಡೂರ್ ಬಳಿಯ ದೇವದುರ್ಗ ಕ್ರಾಸ್ ಹತ್ತಿರ ರಸ್ತೆ ತಡೆಯಲು ಪ್ರತಿಭಟನೆ ನಡೆಸುವುದನ್ನು ಕೈಬಿಡಲು ಅಪರ ಜಿಲ್ಲಾಧಿಕಾರಿಗಳಾದ ಶರಣಬಸಪ್ಪ ಕೋಟೆಪ್ಪಗೋಳ ಅವರು ರೈತ ಮುಖಂಡರಲ್ಲಿ ಇಂದು ಮನವಿ ಮಾಡಿದ್ದಾರೆ.

ಈ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರಾಜ್ಯ ರೈತ ಸಂಘ, ರೈತ ಸೇನೆ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮನವಿ ಮಾಡಿದರು.

ರಾಜ್ಯ ಸರ್ಕಾರವು ನಾರಾಯಣಪುರ ಕಾಲುವೆಗಳಿಗೆ ಮಾರ್ಚ್ 25 ರಿಂದ ನೀರು ಬಿಡದಿರುವ ಕ್ರಮವನ್ನು ಕೈಗೊಂಡಿದ್ದು ,ಈ ಕುರಿತು ಸಭೆಯಲ್ಲಿ ಚರ್ಚಿಸಲಾಗಿ, ಬೇಸಿಗೆ ಕಾಲದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವನ್ನು ತಪ್ಪಿಸಲು ಸರ್ಕಾರ ಈ ನಿರ್ಣಯವನ್ನು ಕೈಗೊಂಡಿದೆ. ಸಾರ್ವಜನಿಕರ ಹಾಗೂ ಜಾನುವಾರುಗಳ ಹಿತ ದೃಷ್ಟಿಯಿಂದ ಕೈಗೊಳ್ಳಲಾದ ಈ ನಿರ್ಣಯದ ವಿರುದ್ಧವಾಗಿ ಪ್ರತಿಭಟನೆಯನ್ನು ನಡೆಸದಿರಲು ಹಾಗೂ ಪ್ರತಿಭಟನೆ ಕೈಬಿಡುವಂತೆ ಅವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ರಾಜ್ಯ ರೈತ ಸಂಘ, ರೈತ ಸೇನೆಯ ರಾಜ್ಯ ಉಪಾಧ್ಯಕ್ಷರಾದ ಲಕ್ಷ್ಮಿಕಾಂತ್ ಪಾಟೀಲ್ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದು, ಈ ಕುರಿತು ಚರ್ಚಿಸಲಾಗಿ, ರೈತ ಮುಖಂಡರು ನೀರು ಬಿಡುವ ವರೆಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದೆಂದು ಸಭೆಗೆ ತಿಳಿಸಿದರು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

9 months ago | [YT] | 3

YadgirNews

9 months ago | [YT] | 3