Jesus Service Media

Praise God
Welcome to our channel Jesus Service Media
𝐕𝐢𝐬𝐢𝐨𝐧 & 𝐌𝐢𝐬𝐬𝐢𝐨𝐧 𝐨𝐟 𝐭𝐡𝐢𝐬 𝐜𝐡𝐚𝐧𝐧𝐞𝐥
𝐇𝐞 𝐦𝐮𝐬𝐭 𝐈𝐧𝐜𝐫𝐞𝐚𝐬𝐞 𝐚𝐧𝐝 𝐈 𝐦𝐮𝐬𝐭 𝐃𝐞𝐜𝐫𝐞𝐚𝐬𝐞. 𝐉𝐨𝐡𝐧 𝟑:𝟑𝟎
Our aim is to Increase Jesus in all our works. So we edit videos for his Glory not for commercial intensions.
𝐀𝐋𝐋 𝐆𝐋𝐎𝐑𝐘 𝐓𝐎 𝐉𝐄𝐒𝐔𝐒

𝗡𝗢𝗧𝗘: 𝗔𝗹𝗹 𝗦𝗼𝗻𝗴𝘀 𝗜𝗻 𝘁𝗵𝗶𝘀 𝗖𝗵𝗮𝗻𝗻𝗲𝗹 𝗕𝗲𝗹𝗼𝗻𝗴𝘀 𝘁𝗼 𝗥𝗲𝘀𝗽𝗲𝗰𝘁𝗶𝘃𝗲 𝗢𝘄𝗻𝗲𝗿𝘀 𝗡𝗢𝗧 𝗠𝗘


Jesus Service Media

ಈ ದಿನದ ದೇವರ ವಾಕ್ಯ | 17-082025

5 months ago | [YT] | 3

Jesus Service Media

ಙ್ಞಾನೋಕ್ತಿಗಳು 18:1-24
1
ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
2
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವದೇ ಅವನಿಗೆ ಸಂತೋಷ.
3
ದುಷ್ಟನು ಬಂದಾಗ ತಾತ್ಸಾರವೂ ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
4
ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5
ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
6
ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7
ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
8
ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
9
ಸೋಮಾರಿಯು ತನ್ನ ಕೆಲಸ ದಲ್ಲಿ ಬಹಳವಾಗಿ ಹಾಳುಮಾಡುವವನಿಗೆ ಸಹೋದ ರನು ಆಗಿದ್ದಾನೆ.
10
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
11
ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
12
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
13
ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
14
ತನ್ನ ಬಲಹೀನತೆಯನ್ನು ಮನುಷ್ಯನ ಆತ್ಮವು ಸಹಿಸುವದು; ಗಾಯಪಟ್ಟ ಆತ್ಮವನ್ನು ಸಹಿಸುವವರು ಯಾರು?
15
ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
16
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
17
ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
18
ಚೀಟು ಕಲಹಗಳನ್ನು ನಿಲ್ಲಿಸಿ ಬಲಿಷ್ಠರನ್ನು ಅಗಲಿಸುತ್ತದೆ;
19
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
20
ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
21
ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
22
ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
23
ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.
24
ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.

1 year ago | [YT] | 4

Jesus Service Media

ಙ್ಞಾನೋಕ್ತಿಗಳು 17:1-28
1
ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
2
ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
3
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ.
4
ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
5
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
6
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
7
ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ.
8
ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.
9
ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
10
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
11
ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
12
ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
13
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
14
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
15
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
16
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
17
ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
18
ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
19
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ.
20
ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು.
21
ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
22
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
23
ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
24
ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
25
ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
26
ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ.
27
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
28
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.

1 year ago | [YT] | 3

Jesus Service Media

‭ಜ್ಞಾನೋಕ್ತಿಗಳು 16:1-33
[1] ಹೃದಯದ ಸಂಕಲ್ಪವು ಮನುಷ್ಯನ ವಶವು; ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವದು. [2] ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು. [3] ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ ನಿನ್ನ ಉದ್ದೇಶಗಳು ಸಫಲವಾಗುವವು. [4] ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ. [5] ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ; ಅವರಿಗೆ ದಂಡನೆ ಖಂಡಿತ. [6] ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ. [7] ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು. [8] ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು. [9] ಮನುಷ್ಯನು ತನ್ನ ಮನದಂತೆ ದಾರಿಯನ್ನಾರಿಸಿಕೊಂಡರೂ ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು. [10] ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು. [11] ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ. [12] ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು ಅಧರ್ಮವನ್ನಾಚರಿಸಲು ಅಸಹ್ಯಪಡುವರು. [13] ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು; ಯಥಾರ್ಥವಾದಿಯನ್ನು ಪ್ರೀತಿಸುವರು. [14] ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು. [15] ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು. [16] ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು. [17] ಸತ್ಯವಂತನ ರಾಜಮಾರ್ಗ ಹಾನಿಗೆ ದೂರ; ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು. [18] ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು. [19] ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವದಕ್ಕಿಂತಲೂ ದೀನರ ಸಂಗಡ ದೈನ್ಯದಿಂದಿರುವದು ವಾಸಿ. [20] [ದೇವರ] ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು; ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು. [21] ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು. [22] ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ. [23] ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವದು. [24] ಸವಿನುಡಿಯು ಜೇನುಕೊಡ; ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ. [25] ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು; ಕಟ್ಟಕಡೆಗೆ ಅದು ಮರಣಮಾರ್ಗವೇ. [26] ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವದು; ಅವನನ್ನು [ದುಡಿಯಲಿಕ್ಕೆ], ಅವನ ಬಾಯೇ ಒತ್ತಾಯ ಮಾಡುವದು. [27] ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ. [28] ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ. [29] ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು. [30] ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಗಳನ್ನು ಕಲ್ಪಿಸುವನು; ತುಟಿಯನ್ನು ಮಡಸಿಕೊಳ್ಳುವವನು ಕೇಡನ್ನು ಸಾಧಿಸುವನು. [31] ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು. [32] ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ. [33] ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.

1 year ago | [YT] | 4

Jesus Service Media

‭ಜ್ಞಾನೋಕ್ತಿಗಳು 15:1-33
[1] ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು. [2] ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು. [3] ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು. [4] ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು. [5] ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು; ಗದರಿಕೆಯನ್ನು ಗಮನಿಸುವವನು ಜಾಣನು. [6] ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ; ದುಷ್ಟನ ಆದಾಯವು ಕಳವಳವೇ. [7] ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ. [8] ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ. [9] ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ; ಧರ್ಮಾಸಕ್ತನು ಆತನಿಗೆ ಪ್ರಿಯ. [10] ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು. [11] ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ. [12] ಧರ್ಮನಿಂದಕನು ಗದರಿಕೆಯನ್ನೊಲ್ಲನು; ಜ್ಞಾನಿಗಳ ಸಂಗಡ ಸೇರನು. [13] ಹರ್ಷಹೃದಯದಿಂದ ಹಸನ್ಮುಖ; ಮನೋವ್ಯಥೆಯಿಂದ ಆತ್ಮಭಂಗ. [14] ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು. [15] ದೀನನ ದಿನಗಳೆಲ್ಲಾ ದುಃಖಭರಿತ; ಹರ್ಷಹೃದಯನಿಗೆ ನಿತ್ಯವೂ ಔತಣ. [16] ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪಧನವೇ ಲೇಸು. [17] ದ್ವೇಷವಿರುವಲ್ಲಿ ಕೊಬ್ಬಿದ ದನದ ಮಾಂಸಕ್ಕಿಂತಲೂ ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ. [18] ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು. [19] ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ. [20] ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು. [21] ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು; ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು. [22] ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು. [23] ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ! [24] ವಿವೇಕಿಗೆ ಜೀವದ ಮಾರ್ಗವು ಮೇಲು ಮೇಲಕ್ಕೆ ಹೋಗುತ್ತದೆ; ಅದನ್ನು ಹಿಡಿದವನು ಪಾತಾಳದಿಂದ ತಪ್ಪಿಸಿಕೊಳ್ಳುವನು. [25] ಯೆಹೋವನು ಗರ್ವಿಷ್ಠನ ಮನೆಯನ್ನು ಕಿತ್ತುಹಾಕುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು. [26] ಕುಯುಕ್ತಿಯು ಯೆಹೋವನಿಗೆ ಅಸಹ್ಯ; ನಯನುಡಿಯು ನಿರ್ಮಲ. [27] ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು. [28] ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ. [29] ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ. [30] ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ. [31] ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು ಜ್ಞಾನಿಗಳ ನಡುವೆ ನೆಲೆಗೊಳ್ಳುವನು. [32] ಶಿಕ್ಷೆಯನ್ನೊಲ್ಲದವನು ತನ್ನನ್ನೇ ನಿರಾಕರಿಸುವನು; ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು. [33] ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.

1 year ago | [YT] | 3