ನಂದಿ ಟಿವಿ

ಇಂದು ಜೆಕೆ ಭವನದಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕುರಿತು ಪ್ರಮುಖ ನಾಯಕರೊಂದಿಗೆ ಸಭೆ ನಡೆಸಲಾಯಿತು. ಹಾಲು ಉತ್ಪಾದಕರಿಗೆ ಸಂಬಂಧಿಸಿದ ಸಮಸ್ಯೆಗಳು, ಒಕ್ಕೂಟದ ಕಾರ್ಯನಿರ್ವಹಣೆ ಹಾಗೂ ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ಅಗತ್ಯ ಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ರೈತರು ಮತ್ತು ಹಾಲು ಉತ್ಪಾದಕರ ಹಿತವನ್ನು ಕಾಪಾಡುವ ದಿಕ್ಕಿನಲ್ಲಿ ಸಂಯುಕ್ತವಾಗಿ ಕಾರ್ಯನಿರ್ವಹಿಸುವ ಕುರಿತು ಅಭಿಪ್ರಾಯ ವಿನಿಮಯ ನಡೆಯಿತು.

3 weeks ago | [YT] | 7

ನಂದಿ ಟಿವಿ

Many more happy returns of the day Happy birthday to you God blessed you be happy.... 💐💐💐

3 months ago | [YT] | 2

ನಂದಿ ಟಿವಿ

ಶಿಡ್ಲಘಟ್ಟ ನಗರ ಠಾಣೆಯ ಪೊಲೀಸರು ಠಾಣಾ ಸರಹದ್ದಿನ ಮನೆಗಳಿಗೆ ಭೇಟಿ ನೀಡಿ, ಹೊಸ ಬೀಟ್ ವ್ಯವಸ್ಥೆಯಾದ ''ಮನೆ ಮನೆಗೆ ಪೊಲೀಸ್" ಕಾರ್ಯಕ್ರಮದ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಿದ್ದು, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಅಪರಾಧಗಳು ಹಾಗೂ ತುರ್ತು ಸಹಾಯವಾಣಿಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.

3 months ago | [YT] | 0

ನಂದಿ ಟಿವಿ

ರಾಜ್ಯದ ಎಲ್ಲಾ ಜಾತಿ, ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ.
ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಹಿಂದೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಅದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಲಾಗುವುದು.
ರಾಯಣ್ಣ ಜನ್ಮದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾಕತಾಳೀಯ ಆದರೂ ಸತ್ಯವಾದ ಸಂಗತಿ. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ.‌
ಶೇ.7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ.
ನಾವು ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ ಎಲ್ಲಾ ಶೋಷಿತ ಸಮುದಾಯಗಳಿಗೂ ಶಿಕ್ಷಣ ಕೊಡುವುದೇ ಆಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ.
ಇಡೀ ರಾಜ್ಯ ಸುತ್ತಿ ಮಠ ಮಾಡಿದ್ದು ನಾವು. ಆದರೆ ಈಗ ಕೆಲವು ಡೋಂಗಿ ಜನ‌ ನಾವೇ ಮಠದ ಸ್ಥಾಪನೆ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರ ಮಾತು ನಂಬಬೇಡಿ. ತೀರ್ಮಾನ ನಿಮಗೆ ಬಿಡುತ್ತಿದ್ದೇನೆ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ. ನಾನು ರಾಜಕಾರಣ ಮಾಡೋದೇ ಸಾಮಾಜಿಕ ನ್ಯಾಯಕ್ಕಾಗಿ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಸಾಮಾಜಿಕ ನ್ಯಾಯಕ್ಕಾಗಿಯೇ ಕೆಲಸ ಮಾಡುತ್ತೇನೆ. ನಾವೆಲ್ಲರೂ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರು ನಡೆದ ದಾರಿಯಲ್ಲೇ ನಡೆಯೋಣ.
- ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣನವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಿ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್.

3 months ago | [YT] | 0

ನಂದಿ ಟಿವಿ

ಪ್ರಧಾನ ಮಂತ್ರಿ ಶ್ರೀ @narendramodi ನರೇಂದ್ರ ಮೋದಿಯವರ ಜನ್ಮದಿನ ಹಾಗು "ಸ್ವಸ್ಥ ನಾರಿ ಸಶಕ್ತ ಪರಿವಾರ" ಅಭಿಯಾನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ ಹಾಗೂ ಟಿಬಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು: ಕೆ. ಸುಧಾಕರ್
ಲೋಕಸಭೆಯ ಸದಸ್ಯರು #ksudhakar

3 months ago | [YT] | 0

ನಂದಿ ಟಿವಿ

ಇಂದು ಕೋಲಾರ ನಗರದ ಎಸ್. ಎನ್. ಆರ್. ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೋಲಾರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಅಮ್ಮಿಕೊಂಡಿದ "ಸ್ವಸ್ಥ ನಾರಿ ಸ್ವಶಕ್ತ ಪರಿಹಾರ ಅಭಿಯಾನ" ಕಾರ್ಯಕ್ರಮಕ್ಕೆ ಚಾಲನೆ ನೀಡಿದ. ಎಂ. ಮಲ್ಲೇಶ್ ಬಾಬು
ಸಂಸದರು, ಕೋಲಾರ ಲೋಕಸಭಾ ಕ್ಷೇತ್ರ.

3 months ago | [YT] | 2

ನಂದಿ ಟಿವಿ

ರಾಜ್ಯ ಮಟ್ಟದ "ಮಂಥನ" – ಆವಿಷ್ಕಾರಗಳು ಮತ್ತು ಉದ್ಯಮ ಯೋಜನೆಗಳ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿಜೇತರನ್ನು ಅಭಿನಂದಿಸಿದೆ. ವಿದ್ಯಾರ್ಥಿಗಳು ಉದ್ಯೋಗ ಪಡೆಯುವುದಷ್ಟೇ ಅಲ್ಲದೆ, ಉದ್ಯೋಗ ಸೃಷ್ಟಿಕರ್ತರಾಗುವಂತೆ ರಾಜ್ಯ ಸರ್ಕಾರ ನೂತನ ಕ್ರಮಗಳನ್ನು ಕೈಗೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುವುದಾಗಿ ಆಶ್ವಾಸನೆ ನೀಡಿದ. ಎಂ. ಸಿ. ಸುಧಾಕರ್
ಕರ್ನಾಟಕದ ಉನ್ನತ ಶಿಕ್ಷಣ ಸಚಿವರು. #mcsudhakar

3 months ago (edited) | [YT] | 2

ನಂದಿ ಟಿವಿ

ಚಿಂತಾಮಣಿ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಸಾಮರ್ಥ್ಯ ಸೌಧದಲ್ಲಿ ಕಟ್ಟಡ ಕಾರ್ಮಿಕರಿಗೆ ಸಲಕರಣೆಗಳ ಕಿಟ್ ವಿತರಿಸಲಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡ ಕುರುಟಹಳ್ಳಿಯ ಶ್ರವಣ್ ಹಾಗೂ ಗೋಪಲ್ಲಿಯ ಪ್ರಜ್ವಲ್ ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನ ಆಚರಿಸಲಾಯಿತು. #nanditv

7 months ago | [YT] | 0

ನಂದಿ ಟಿವಿ

Congratulations #RCB #RCB💐💐💐💐💐

7 months ago | [YT] | 7